Basic Information

ಡಾ. ಎಸ್.ಎಸ್. ಭೂಮಣ್ಣವರ ಅವರು ಗದಗ ಜಿಲ್ಲೆಯ ನರಗುಂದ ತಾಲೂಕಿನ ಬೆನಕನಕೊಪ್ಪ ಗ್ರಾಮದವರು, ಪ್ರಾಥಮಿಕ ಮಾಧ್ಯಮಿಕ ಶಿಕ್ಷಣವನ್ನು ಸ್ವ ಗ್ರಾಮದಲ್ಲಿಯೆ ಮುಗಿಸಿ, 2004ರಲ್ಲಿ ತುಮಕೂರಿನ ಸಿದ್ದಾರ್ಥ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ.ಇಡಿ ಮುಗಿಸಿದ್ದಾರೆ. 2005ರಲ್ಲಿ ಕುವೆಂಪು ವಿಶ್ವವಿದ್ಯಾನಿಲಯದ ಸ್ನಾತಕೊತ್ತರ ಶಿಕ್ಷಣ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರವಾದ ಬಾಪೂಜಿ ಸ್ನಾತಕೋತ್ತರ ಶಿಕ್ಷಣ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ ದಾವಣಗೇರೆಯಲ್ಲಿ ಮುಗಿಸಿದ್ದಾರೆ. 2006ರಿಂದ ಬಾಗಲಕೋಟೆಯ ಬಸವೇಶ್ವರ ಸಂಯುಕ್ತ ಪ.ಪೂ ಕಾಲೇಜಿನಲ್ಲಿ ಶಿಕ್ಷಣಶಾಸ್ತ್ರ ಉಪನ್ಯಾಸಕರಾಗಿ ಸೇವೆ ಪ್ರಾರಂಭಿಸಿ, 2009ರಿಂದ ಪ್ರಸ್ತುತ ಬಿ.ವಿ.ವಿ.ಸಂಘದ ಶಿಕ್ಷಣ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಶಿಕ್ಷಣ ಅಧ್ಯಯನ ವಿಭಾಗ ಬಾಗಲಕೋಟದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2012ರಲ್ಲಿ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯನ್ನು (ಶಿಕ್ಷಣಶಾಸ್ತ್ರ ವಿಷಯದಲ್ಲಿ) ಪಾಸಾಗಿದ್ದಾರೆ. 2020ರಲ್ಲಿ ಇವರು ಮಂಡಿಸಿದ "ಕರ್ನಾಟಕ ರಾಜ್ಯದ ಪ್ರೌಢಶಾಲಾ ಹಂತದಲ್ಲಿ ಕನ್ನಡ ಸಾಹಿತ್ಯಾಭಿರುಚಿ ಬೆಳೆಸುವಲ್ಲಿ ಶಿಕ್ಷಕರ ಪಾತ- ಒಂದು ವಿಮರ್ಶಾತ್ಮಕ ಅಧ್ಯಯನ" ಎಂಬ ಪ್ರೌಢಪ್ರಬಂಧಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಡಾ.ಭೂಮಣ್ಣವರ ಸುಮಾರು 26 ಸಂಶೋಧನಾ ಲೇಖನಗಳನ್ನು ರಾಷ್ಟ್ರಮಟ್ಟದ ಯು.ಜಿ.ಸಿ ಪಟ್ಟಿಯಲ್ಲಿ ಇರುವ ಸಂಶೋಧನಾ ಪತ್ರಿಕೆಗಳಲ್ಲಿ ಪ್ರಕಟಿಸಿದ್ದಾರೆ. ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ, ಕಾರ್ಯಾಗಾರ ಮತ್ತು ಸಮ್ಮೇಳನಗಳಲ್ಲಿ ಭಾಗವಹಿಸಿ ತಮ್ಮ ಪತ್ರಿಕೆಗಳನ್ನು ಮಂಡಿಸಿದ್ದಾರೆ. ಇವರು ಸ್ನಾತಕೋತ್ತರ ಶಿಕ್ಷಣ ವಿಭಾಗದ (MEd) 4 ಜನರು ವಿದ್ಯಾರ್ಥಿಗಳಿಗೆ ಸಂಶೋಧನಾ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ರಾಜ್ಯದ ಬಿಇಡಿ ಕಾಲೇಜುಗಳಲ್ಲಿಯೇ ಪಪ್ರಥಮ ಎನ್.ಎಸ್.ಎಸ್ ಘಟಕವನ್ನು ಸ್ಥಾಪಿಸಿದ ಕೀರ್ತಿ ಇವರದ್ದಾಗಿದೆ. ರಾಷ್ಟ್ರಮಟ್ಟದ ಎನ್.ಎಸ್.ಎಸ್ ನಾಯಕತ್ವ ತರಬೇತಿ ಶಿಬಿರ ಹಾಗೂ ಕ್ಯಾಂಪ್ಗಳಿಗೆ ವಿದ್ಯಾರ್ಥಿಗಳನ್ನು ವಿಶ್ವವಿದ್ಯಾಲಯದ ಪ್ರತಿನಿಧಿಯಾಗಿ ಕರೆದುಕೊಂಡು ಹೋಗಿದ್ದಾರೆ. ರಾಜ್ಯ ಮಟ್ಟದ ಹಾಗೂ ಅಂತರ್ ವಿಶ್ವವಿದ್ಯಾನಿಲಯಗಳಲ್ಲಿ ಜರುಗಿದ ವಿದ್ಯಾರ್ಥಿಗಳ ವಿಚಾರ ಸಂಕಿರಣಗಳಿಗೆ ನಿರ್ಣಾಯಕರಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ Life Member of National Association For Education Trust Ahamedabad & Kannada Sahitya Parishath, Bengalore. Review Member International Journal of Creative Research Thoughts, Life Member of Journal of All India Association for Educational Research ಮೂಲಕ ಸಂಶೋಧನಾ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಲಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದರು ಸಹ ಈ-ತಂತ್ರಾಂಶಗಳನ್ನು ಹೊಸ ಹೊಸ ಮೋಬೈಲ್ ಯ್ಯಾಪ್ತಿಗಳನ್ನು ಶಿಕ್ಷಣದಲ್ಲಿ ಹೇಗೆ ಬಳಿಸಿಕೊಳ್ಳುವುದರ ಕುರಿತು ವಿವಿಧ ಮಹಾವಿದ್ಯಾಲಯಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸದ್ದಾರೆ. ತಮ್ಮದೇ ಯೂಟ್ಯೂಬ್ ಚಾನಲ್ ಮೂಲಕ ವಿದ್ಯಾರ್ಥಿಗಳಿಗೆ ಟಿ.ಇ.ಟಿ ಹಾಗೂ ಸಿ.ಈ.ಟಿಗಳಿಗೆ ಮಾರ್ಗದರ್ಶಿ ವಿಡಿಯೋಗಳನ್ನು ಮಾಡಿದ್ದಾರೆ. ಅಲ್ಲದೇ ಪ್ರತಿ ತಿಂಗಳ ವಿದ್ಯಾರ್ಥಿಗಳಿಗೆ ಆನ್ ಲೈನ್ ರಸಪ್ರಶ್ನೆ ಕಾರ್ಯಕ್ರಮಗಳನ್ನು ಸಂಘಟಿಸುತ್ತಿದ್ದಾರೆ. ಪಠ್ಯ ಹಾಗೂ ಪತ್ಯೇತರ ಚಟುವಟಿಕೆಗಳನ್ನು ಪ್ರತಿವರ್ಷ ಯಶಸ್ವಿಯಾಗಿ ಸಂಘಟಿಸುತ್ತಾ, ಇಂದು ಇನ್ನೂ (IGNOU B Ed Study center 1352p) ಬಾಗಲಕೋಟ ಅಧ್ಯಯನ ಕೇಂದ್ರದ ಸಂಯೋಜಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

WhatsApp Button